ಬೆಂಗಳೂರಿನಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಲಾಗಿದೆ, ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರ್ತಪೇಟೆಯಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ ಐವರು ಮೃತಪಟ್ಟು, ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಹಿನ್ನೆಲೆ ಸ್ಥಳಕ್ಕೆ ಡಿಸಿಎಂ ಭೇಟಿ ನೀಡಿ ದುರಂತ ನಡೆದ ಕಟ್ಟಡ ಪರಿಶೀಲನೆ ಮಾಡಿದರು. ದುರಂತ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅಕ್ರವಾಗಿ ಈ ಕಟ್ಟಡ ಕಟ್ಟಲಾಗಿದೆ. ಈ ಪರಿಸ್ಥಿತಿಗೆ ನಮ್ಮ ಸಾರ್ವಜನಿಕರನ್ನೇ ದೂರಬೇಕು ಎಂದಿದ್ದಾರೆ.
ಇಲ್ಲಿ ಬೆಂಕಿ ದುರಂತ ಸಂಭವಿಸಿದಾಗ ಅಗ್ನಿಶಾಮಕ ವಾಹನ ಬರಲು ಆಗದೆ ಒಂದೂವರೆ ಕಿಲೋ ಮೀಟರ್ ದೂರದಿಂದ ನೀರು ತಂದು ಹಾಕಲಾಗಿದೆ. ಈಗಾಗಲೇ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ ಅರೆಸ್ಟ್ ಮಾಡಲಾಗಿದೆ. ಅಕ್ರಮವಾಗಿ ಕಟ್ಟಡ ಕಟ್ಟುವವರಿಗೆ ನೋಟಿಸ್ ನೀಡಬೇಕು ಎಂದರು.
ವಿಲ್ಸನ್ ಗಾರ್ಡನ್ನಲ್ಲಿ ಮನೆಯಲ್ಲಿ ಸ್ಫೋಟ ಆಯ್ತು. ಬಾಡಿಗೆ ಪಡೆಯುವ ಮಾಲೀಕರು, ಸುರಕ್ಷತಾ ಕ್ರಮ ವಹಿಸದಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಬಂದಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ಮೃತರ ಕುಟುಂಬಕ್ಕೆ ವೈಯಕ್ತಿಯವಾಗಿ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.