ಬಳ್ಳಾರಿ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಶ್ವೇತಾ(38), ಕನಕಪುರದ ಬಾಲ ನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ.
ಗಾಯಾಳುಗಳನ್ನು ಸಿರುಗುಪ್ಪ ಆಸ್ಪತ್ರೆ ಮತ್ತು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಳ್ಳಾರಿ ಎಸ್ಪಿ ಡಾ.ಶೋಭಾರಾಣಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.