Thursday, November 27, 2025
Menu

ವಿಶ್ವಕಪ್ ಗೆದ್ದ ಮಹಿಳಾ ಕಬಡ್ಡಿ ತಂಡದ  ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಸಿಎಂ ಅಭಿನಂದನೆ

ಮಹಿಳಾ ಕ್ರೀಡಾ ಸಾಧಕರಾದ ಧನಲಕ್ಷ್ಮಿ ಹಾಗೂ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದ್ದಾರೆ.

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಸಿಎಂ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.‌

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್  ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *