ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರ ಹಾಗೂ ಕಲಘಟಗಿ ಕಂದಾಯ ಉಪ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರಗಳ ವಿತರಣೆಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಬೆಂಗಳೂರು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರಗಳ ವಿತರಣೆಯಾಗಿಲ್ಲ. ಇದಕ್ಕಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿಆರ್ಜೆ, ಅರಣ್ಯ ಇಲಾಖೆ ಕಾರ್ಯದರ್ಶಿಗಳಾದ ಮನೋಜ್ ಕುಮಾರ್, ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ನಿರ್ದೇಶಕರಾದ ಯೋಗೇಶ್, ಧಾರವಾಡ ಜಿಲ್ಲೆಯ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಮಿಕರ ಕಲ್ಯಾಣ ಮಂಡಳಿ ಕೌಶಲ್ಯ ಕೇಂದ್ರಗಳ ಕುರಿತು ಚರ್ಚೆ
ವಿಕಾಸಸೌಧದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಸ್ಥಾಪಿಸಲಾಗುತ್ತಿರುವ ಕೌಶಲ್ಯ ಕೇಂದ್ರಗಳ ಕುರಿತು ಸಚಿವರು ಕುರಿತು ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಉಪಾಧ್ಯಕ್ಷರು ಹಾಗೂ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ , ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ. ಜಂಟಿ ಕಾರ್ಮಿಕ ಆಯುಕ್ತರಾದ ಡಾ ರವಿಕುಮಾರ್ ಇತರರು ಉಪಸ್ಥಿತರಿದ್ದರು.


