Menu

ಹೆಬ್ಬಾಳ ಜಂಕ್ಷನ್ ನಲ್ಲಿ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ, ಡಿಸಿಎಂ

ಕೆ ಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ವಾಹನಗಳ ಸರಾಗ ಸಂಚಾರಕ್ಕೆ ಅನುವಾಗುವಂತೆ ಹೆಬ್ಬಾಳ ಜಂಕ್ಷನ್ ನಲ್ಲಿ ಬಿಡಿಎ ನಿರ್ಮಿಸಿರುವ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಟೇಪ್ ಕಟ್ ಮಾಡಿ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಕಾಲೇಜು ದಿನಗಳ ಎಜ್ಡಿ ಬೈಕ್ ಚಾಲನೆಗೆ ಹಸಿರು ಬಾವುಟ ತೋರಿಸುವ ಮೂಲಕ ಸೋಮವಾರ ಉದ್ಘಾಟನೆ ಮಾಡಿದರು.

ಕೆ ಆರ್ ಪುರದಿಂದ  ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್​​ ಬೈಕ್ ಸವಾರಿ ಮಾಡಿದರು. ತಮ್ಮ ನೆಚ್ಚಿನ ಯೆಜ್ಡಿ ಬೈಕ್ ಹತ್ತಿ ಹೆಬ್ಬಾಳ ನೂತನ ಮೇಲ್ಸೇತುವೆ ಮೇಲೆ ಸವಾರಿ ಮಾಡಿದರು.

ಬೈಕ್ ಪ್ರೇಮಿ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಅಂದರೆ ಪದವಿ ವ್ಯಾಸಂಗ ಮಾಡುವಾಗ 10,400 ರೂ. ಗೆ ಸಿಎಇ 7684 ಸಂಖ್ಯೆಯ ಯಡ್ಜಿ ಬೈಕ್ ಖರೀದಿಸಿದ್ದರು. ಕಾಲೇಜು ದಿನಗಳಲ್ಲಿ ಬಳಸಿದ್ದ ಈ ಬೈಕ್ ಅನ್ನು ಕಳೆದ ವರ್ಷ ಸೆಪ್ಟೆಂಬರ್‌ ನಲ್ಲಿ ಬೆಂಗಳೂರಿನ ಹಳೆಯ ಬೈಕ್‌ ನವೀಕರಣ ಮಾಡುವ ಯುವಕ ಸುಪ್ರೀತ್ ಅವರು ರೀ ಕಂಡೀಷನಿಂಗ್ ಮಾಡಿದ್ದರು. ಈಗ ತಮ್ಮ ನೆಚ್ಚಿನ ಬೈಕ್ ಅನ್ನು ಹೆಬ್ಬಾಳ ಮೇಲ್ಸೇತುವೆ ಮೇಲೆ ಸೋಮವಾರ ಓಡಿಸಿದರು. ಅವರ ಅಭಿಮಾನಿಗಳು ಜೋರು ಚಪ್ಪಾಳೆ ತಟ್ಟಿ, ಸಿಳ್ಳೆ ಹೊಡೆದು ಸಂಭ್ರಮಿಸಿದರು.

ಹೆಬ್ಬಾಳ ಮೇಲ್ಸೇತುವೆ 700 ಮೀ. ಉದ್ದದ ಲೂಪ್ ರಸ್ತೆಯಾಗಿದ್ದು, 2023ರಲ್ಲಿ ಇದರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ರೂ.80 ಕೋಟಿ ವೆಚ್ಚದಲ್ಲಿ ಈ ಮೇಲ್ಸೆತುವೆ ನಿರ್ಮಾಣ ಮಾಡಲಾಗಿದ್ದು, ಇದರಿಂದ ಶೇ. 30 ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಯೋಗಿಕ ಸಂಚಾರ ಮಾಡುವ ಮೂಲಕ ಪರೀಕ್ಷೆ ಮಾಡಿದ್ದರು.

 

ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಮಾಜಿ ಸಂಸದೆ, ನಟಿ ರಮ್ಯಾ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿ.ಡಿ.ಎ. ಕಮಿಷನರ್ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *