ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಭಾರತ- ರಷ್ಯಾ 23ನೇ ದ್ವಿಪಕ್ಷೀಯ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ, ಉಕ್ರೇನ್ ಜೊತೆಗಿನ ಯುದ್ಧ, ಪೆಟ್ರೋಲ್ ಖರೀದಿ ವಿವಾದ ಸೇರಿದಂತೆ ಹಲವು ವಿಷಯಗಳ ಕುರಿತು ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮರ್ಮು ರಷ್ಯಾ ಅಧ್ಯಕ್ಷರನ್ನು ಆಹ್ವಾನಿಸಲಿದ್ದು, ರಾಷ್ಟ್ರಪತಿ ಭವನದಲ್ಲಿ ಭೋಜನ ಕೂಟ ಆಯೋಜಿಸಿದ್ದಾರೆ.
ಕಳೆದ ಬಾರಿ ಮಾಸ್ಕೊಗೆ ಎನ್ ಐಎ ಮುಖ್ಯಸ್ಥ ಅಜಿತ್ ಧೋವಲ್ ಭೇಟಿ ವೇಳೆ ಮಾಧ್ಯಮದ ಜೊತೆ ಮಾತನಾಡಿದ್ದ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು.


