ಕಲಬುರಗಿಯಲ್ಲಿ ತರಬೇತಿಯಲ್ಲಿದ್ದ ಪಿಎಸ್‌ಐ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಬಕಾರಿ ಇಲಾಖೆ ಪಿಎಸ್‌ಐ ಮಂಜುನಾಥ (46) ಹೃದಯಾಘಾತದಿಂದ ಅಸು ನೀಗಿದವರು.
ಕಲಬುರಗಿ ನಗರದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಈ ದುರಂತ ನಡೆದಿದೆ. ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ತರಬೇತಿ ನಿಮ್ಮಿತ್ತ ಕಲಬುರಗಿಗೆ ಬಂದಿದ್ದರು.
ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಜಯದೇವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಜ್ಯಾದಾದ್ಯಂತ ಹೃದಯಘಾತಕ್ಕೆ ಜನರು ಬಲಿಯಾಗುತ್ತಿರುವುದು ಮುಂದುವರಿದಿದೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವ್ಯವಸ್ಥೆಗೆ ಮುಂದಾಗಿದೆ. ಜೊತೆಗೆ ಟೆನೆಕ್ಟೆಪ್ಲೇಸ್ ಚುಚ್ಚುಮದ್ದು ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲು ಕ್ರಮ ವಹಿಸಿದೆ.