ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಆಯುಷ್ ಮಾತ್ರೆ ತಂಡವನ್ನು ಮುನ್ನಡೆಸಲಿದ್ದಾರೆ.
ಐಪಿಎಲ್ ನಲ್ಲಿ ಮಿಂಚಿದ ನಂತರ ಭಾರತ ಕಿರಿಯರ ತಂಡದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. 18 ವರ್ಷದ ಆಲ್ ರೌಂಡರ್ ವಿಹಾನ್ ಮಲ್ಹೋತ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದು, ಪಾಕಿಸ್ತಾನ ಮತ್ತು ಕ್ವಾಲಿಫೈಯರ್ 1 ಮತ್ತು 2 ತಂಡಗಳು ಸ್ಥಾನ ಪಡೆದಿವೆ. ಡಿಸೆಂಬರ್ 12ರಂದು ಭಾರತ ಕ್ವಾಲಿಫೈಯರ್ -1 ತಂಡವನ್ನು ಎದುರಿಸಲಿದೆ. ಡಿಸೆಂಬರ್ 14ರಂದು ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಡಿಸೆಂಬರ್ 21ರಂದು ಫೈನಲ್ ನಡೆಯಲಿದೆ.


