Menu

ಮಂಗಳೂರಿಗೆ 675 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ: ಸಚಿವ ಬಿ.ಎಸ್.ಸುರೇಶ್

bhyrati suresh

ವಿಧಾನಪರಿಷತ್ತು: ಮಂಗಳೂರು ನಗರದಲ್ಲಿ 675.51 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 675.51 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಒಂದು ಯೋಜನೆ ಪೂರ್ಣಗೊಂಡಿದೆ. 2026 ರ ಡಿಸೆಂಬರ್ ವೇಳೆಗೆ ಇನ್ನೆರಡು ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಅಮೃತ್ ನೆರವಿನ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಹೂಡಿಕೆ ಕಾರ್ಯಕ್ರಮವಾದ ಜಲಸಿರಿ ಅಡಿ 316.51 ಕೋಟಿ ರೂಪಾಯಿ ವೆಚ್ಚದಲ್ಲಿ 8 ಒಳಚರಂಡಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಈಗಾಗಲೇ 5 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 3 ಕಾಮಗಾರಿಗಳು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಸಚಿವರು ಹೇಳಿದರು.

ಮುದಗಲ್ ಪಟ್ಟಣಕ್ಕೆ ನೀರು ಪೂರೈಕೆಗೆ ಅಗತ್ಯ ಕ್ರಮ

ಸದಸ್ಯ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Related Posts

Leave a Reply

Your email address will not be published. Required fields are marked *