ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿರುವ ಆರೋಪದಡಿ ಧರ್ಮಸ್ಥಳ ಪೊಲೀಸರು ಯೂಟ್ಯೂಬರ್ ಸಮೀರ್ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬನ್ನೇರುಘಟ್ಟದಲ್ಲಿರುವ ಸಮೀರ್ ಬಾಡಿಗೆ ಮನೆಯನ್ನು ಪೊಲೀಸರು ಸುತ್ತುವರಿದಿದ್ದು, ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಧರ್ಮಸ್ಥಳ ಕ್ಷೇತ್ರದ ಕುರಿತು ಅಪಪ್ರಚಾರ ನಡೆಸಿರುವುದಾಗಿ ಸಮೀರ್ ವಿರುದ್ಧ ಹಿಂದೂ ಸಂಘಟನೆಗಳು ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಮೀರ್ ಬಂಧನ ಮಾಡುವಂತೆ ಆಗ್ರಹ ಕೇಳಿ ಬಂದಿದೆ.
ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ವಿಡಿಯೋ ಪ್ರಕಟಿಸಿ ಅವಹೇಳನ ಮಾಡಿದ್ದರೂ ಯಾಕೆ ಇನ್ನೂ ಆತನ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದರು. ಅದೇ ರೀತಿ ಮಹೇಶ್ ಶೆಟ್ಟಿ ತಿರೋಡಿಯವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.