Menu

ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ನೀಡಲಾಗಿರಲಿಲ್ಲ. ಪೊಲೀಸರ ಈ ನಿರಾಕರಣೆ ನಡುವೆಯೂ ಪ್ರತಿಭಟನೆ ಮುಂದುವರಿಸಲಾಗಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನೆ ನಿಯಂತ್ರಣ ಕ್ರಮ ಕೈಗೊಂಡರು.

ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಯುವಕರು ನಮಗೆ ಉದ್ಯೋಗ ಬೇಕು, ವರ್ಷಗಳಿಂದ ಹುದ್ದೆಗಳು ಖಾಲಿ ಇವೆ ಎಂಬ ಘೋಷಣೆ ಕೂಗುತ್ತಾ ನಮ್ಮ ಧ್ವನಿಯನ್ನು ಸರ್ಕಾರದವರಿಗೆ ತಲುಪಿಸಲು ಶಾಂತಿಯುತ ರ‍್ಯಾಲಿ ನಡೆಸುತ್ತಿದ್ದೇವೆ. ತಡೆಯುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಕರ್ತವ್ಯ. ಅನುಮತಿ ಇಲ್ಲದೆ ದೊಡ್ಡ ಗುಂಪಿನ ರ‍್ಯಾಲಿ ನಡೆಸುವುದು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಉಂಟುಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸರು ಪ್ರತಿಭಟನಾನಿರತರನ್ನು ಬಸ್‌ಗಳಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕಾಗಮಿಸಿ, ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Related Posts

Leave a Reply

Your email address will not be published. Required fields are marked *