Menu

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ: ಡಿಕೆ ಶಿವಕುಮಾರ್

DK Shivakumar Municipal Elections

“ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್ ಜವರಾಯಿ ಗೌಡ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಜಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್  ಗುರುವಾರ ಉತ್ತರಿಸಿದರು.

“15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ. 18-08-2025ರ ವರೆಗೂ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ” ಎಂದು ಹೇಳಿದರು.

“ವಾರ್ಡ್ ಗಳ ಪುನರ್ ವಿಂಗಡಣೆ 01-11-2025ಕ್ಕೆ ನಡೆಯಲಿದೆ. ಇದಕ್ಕಾಗಿ ಪಾಲಿಕೆಯಲ್ಲಿ ಆಯುಕ್ತರ ನೇತೃತ್ವದ ಪ್ರತ್ಯೇಕ ತಂಡ ಇದೆ. ನಾವು ನ್ಯಾಯಾಲಯಕ್ಕೆ ಕಾಲ ಮಿತಿಯಲ್ಲಿ ಅಫಿಡವಿಟ್ ಸಲ್ಲಿಸಿದ್ದೇವೆ. ಇನ್ನು ವಾರ್ಡ್ ಗಳ ರಚನೆ ಬಗ್ಗೆ ಪುನರ್ ವಿಂಗಡಣೆ ಬಳಿಕ ಅಧಿಸೂಚನೆ ಹೊರಡಿಸಲಾಗುವುದು” ಎಂದು ವಿವರಿಸಿದರು.

ಆದಷ್ಟು ಬೇಗ ಚುನಾವಣೆ ನಡೆಸಿ ಎಂದು ಸದಸ್ಯರ ಮನವಿಗೆ ಸ್ಪಂದಿಸಿದ ಸಚಿವರು, “ಮಾನ್ಯ ಸದಸ್ಯರ ಸಲಹೆಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇವೆ” ಎಂದರು.

Related Posts

Leave a Reply

Your email address will not be published. Required fields are marked *