Wednesday, December 03, 2025
Menu

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿಸೆಂಬರ್ 17ರಿಂದ ಸಾಕ್ಷಿಗಳ ವಿಚಾರಣೆಗೆ ನಿರ್ಧಾರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯನ್ನು ಡಿಸೆಂಬರ್ 17ರಿಂದ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳು ಪೊಲೀಸರು ದಾಖಲಿಸಿದ ದೋಷಾರೋಪಗಳನ್ನು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಡಿಸೆಂಬರ್ 17ರಿಂದ ಸಾಕ್ಷ್ಯಗಳ ವಿಚಾರಣೆ ನಡೆಸಲು ತೀರ್ಮಾನಿಸಿದೆ.

ಪವಿತ್ರಾ ಗೌಡ ಪರ ವಕೀಲ ಬಾಲನ್​ ಅವರಿಗೆ ಕೋರ್ಟ್​ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದಾರೆ. ಸಹಾಯಕ ಎಸ್​ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು, ಎಫ್ಎಸ್ಎಲ್ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಹಾಯಕ ಎಸ್​ಪಿಪಿ ಸಚಿನ್ ಮನವಿ ಮಾಡಿದ್ದಾರೆ. ಅದರಂತೆ, ಸಾಕ್ಷಿ ನಂಬರ್ ಏಳು ಮತ್ತು ಎಂಟಕ್ಕೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ.

ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜಾಮೀನು ರದ್ದಾದ ಬಳಿಕ ಅವರು ಪರಪ್ಪನ ಅಗ್ರಹಾರ ಜೈಲು ಸೇರಿ 110ಕ್ಕೂ ಅಧಿಕ ದಿನಗಳು ಕಳೆದಿವೆ. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ದರ್ಶನ್ ಅವರಿಗೂ ಸಂಕಷ್ಟ ಎದುರಾಗಿದೆ.

Related Posts

Leave a Reply

Your email address will not be published. Required fields are marked *