Menu

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್‌ ಕುಮಾರ್‌ ರಾಜೀನಾಮೆ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸುನಿಲ್ ಕುಮಾರ್​, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಸುನಿಲ್​ ಕುಮಾರ್ಗೆ ಯಾವುದೇ ವಿರಸವಿಲ್ಲ, ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ವಿಜಯೇಂದ್ರ ಜೊತೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ.

ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನೆಲ್ಲೇ ಸುನಿಲ್ ಕುಮಾರ್ ಹುದ್ದೆಯಿಂದ ಮುಕ್ತಿಗೊಳಿಸುವಂತೆ ಹೈಕಮಾಂಡ್​ಗೆ ಮನವಿ ಮಾಡಿರುವುದು ಅಚ್ಚರಿಯ ಬೆಳವಣಿಗೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಸುನಿಲ್ ಕುಮಾರ್ ಅವರ ಮನವಿ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ತಿಳಿದು ಬಂದಿದೆ.

ಹೈಕಮಾಂಡ್​ ಸುನಿಲ್ ಕುಮಾರ್ ಅವರ ಮನವಿಯನ್ನು ಬಿಜೆಪಿ ಸ್ವೀಕರಿಸಿದರೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಯಾರು ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಎನ್ ರವಿ ಕುಮಾರ್​ ಹಾಗೂ ಡಿಎಸ್ ಅರುಣ್ ಸ್ಪರ್ಧೆಯಲ್ಲಿದ್ದಾರೆ. ​
ಮುಂಬರುವ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆಗೆ ಯತ್ನಾಳರನ್ನೇ ಅಭ್ಯರ್ಥಿಯಾಗಿಸುವ ಬಗ್ಗೆ ಅವರ ಬಣದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ.

 

Related Posts

Leave a Reply

Your email address will not be published. Required fields are marked *