Menu

ದೇವದಾಸಿ ಪಿಡುಗು ತೊಲಗಿಸಲು ಯೋಜನೆ, ವಿಶೇಷ ಅನುದಾನ

ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ವಿಧಾನಸೌಧ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ  ನಡೆಯಿತು. ಇದೇ ವೇಳೆ, ಬಾಕಿಯಿರುವ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದರು.  ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸೂಚನೆ ನೀಡಿದರು.

 

Related Posts

Leave a Reply

Your email address will not be published. Required fields are marked *