Menu

ಸಿಬ್ಬಂದಿ ಸಮಸ್ಯೆ: ಸಾವಿರಕ್ಕೂ ಹೆಚ್ಚು ಇಂಡಿಗೊ ವಿಮಾನ ಹಾರಾಟ ರದ್ದು

ಸಿಬ್ಬಂದಿ ಸಮಸ್ಯೆಯಿಂದ 1000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿ, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.

ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಸದ್ಯದಲ್ಲೇ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟ ಮತ್ತೆ ಆರಂಭಿಸುವುದಾಗಿ ಹೇಳಿದೆ. ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ದೆಹಲಿಯಲ್ಲಿ ನಿರ್ಗಮನ ಮತ್ತು ಆಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನ, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ವಿಮಾನ ಹಾಗೂ ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳು ಸೇರಿದಂತೆ ದೇಶ್ಯಾದ್ಯಂತ 500ಕ್ಕೂ ಹೆಚ್ಚಿನ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ವಿಮಾನಗಳ ವಿಳಂಬ, ಸ್ಥಗಿತದಿಂದ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇಂಡಿಗೋ ಕೌಂಟರ್‌ಗಳ ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಲು ಜನರು ಕ್ಯೂ ನಿಂತಿದ್ದಾರೆ. ಬೆಂಗಳೂರಿನಲ್ಲಿ ವಿಮಾನ ವಿಳಂಬವಾದ ಹಿನ್ನೆಲೆ ಪ್ರಯಾಣಿಕರು ನಿಲ್ದಾಣದಲ್ಲಿ ಭಜನೆ ಮಾಡಿ, ಹರೇ ಕೃಷ್ಣ ಹರೇ ರಾಮ ಅಂತ ಹಾಡಿ ನೃತ್ಯ ಮಾಡಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್‌ನಲ್ಲಿ ಪ್ರಯಾಣಿಕರ ದಂಡು ಗಂಟೆಗಳ ಕಾಲ ನಿಂತಲ್ಲೇ ನಿಂತಿವೆ. ಬೆಳಗ್ಗೆಯಿಂದಲೂ ಲೆಗೇಜ್ ಹಿಡಿದು ಪ್ರಯಾಣಿಕರು ನಿಂತಿದ್ದಾರೆ. ಟಿಕೆಟ್ ಬುಕಿಂಗ್ ರದ್ದುಗೊಳಿ ಸಲು , ವಿಮಾನದಲ್ಲಿ ಪ್ರಯಾಣ ಬೆಳೆಸಲು ಬಂದಿದ್ದಾರೆ. ಜನ ದಟ್ಟಣೆಯಿಂದ ಇಂಡಿಗೊ ಸಿಬ್ಬಂದಿ ಹೈರಾಣಾಗಿದ್ದಾರೆ.

Related Posts

Leave a Reply

Your email address will not be published. Required fields are marked *