ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸೋದರ ಡಿಕೆ ಸುರೇಶ್‌ಗೂ ಈಗಾಗಲೇ ನೋಟಿಸ್ ಜಾರಿಯಾಗಿದೆ.
ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಇನಾಯತ್ ಅಲಿಗೂ ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ಇನಾಯತ್ ಅಲಿಯ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆ ನಡೆಸಿದೆ. ಮುಂದುವರಿದ ಭಾಗವಾಗಿ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದೆ.
ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಪ್ರಮಾಣ, ಯಾವ ರೀತಿ ದೇಣಿಗೆ ಕೊಡಲಾಗಿದೆ ಎಂಬುದರ ಮಾಹಿತಿ, ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.


