Saturday, January 24, 2026
Menu

ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್  ಅಧಿವೇಶನದಲ್ಲಿ  ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಅವರು ಮಾತನಾಡಿದರು.  ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ.  ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Related Posts

Leave a Reply

Your email address will not be published. Required fields are marked *