Menu

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

vidanasouda

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ.

ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದ್ದು, ಯೋಜನೆಯ ಪ್ರಗತಿ ವಿವರಗಳನ್ನು ವಿವರಿಸಿದ್ದಾರೆ. ಒಟ್ಟು 2.84 ಲಕ್ಷ ನೋಂದಾಯಿತ ನಿರುದ್ಯೋಗಿ ಫಲಾನುಭವಿಗಳಲ್ಲಿ ಉದ್ಯೋಗ ಪಡೆದವರ ಸಂಖ್ಯೆ ಬಹಳ ಕಡಿಮೆ ಇರುವುದು ಸರ್ಕಾರದ ಉತ್ತರದ ಮೂಲಕ ದೃಢಪಟ್ಟಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ಯುವನಿಧಿ ಯೋಜನೆ ಪ್ರಾರಂಭವಾದ ನಂತರ ಈವರೆಗೆ ಕೇವಲ 2,327 ಫಲಾನುಭವಿಗಳು ಉದ್ಯೋಗ ಅಥವಾ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಯುವನಿಧಿ ಯೋಜನೆಗೆ ನೋಂದಣಿ ಮಾಡಿದ ಫಲಾನುಭವಿಗಳನ್ನು ಆದ್ಯತೆ ಆಧಾರದ ಮೇಲೆ 17,715 ಫಲಾನುಭವಿಗಳನ್ನು ಸಂಪರ್ಕಿಸಲಾಗಿತ್ತು. ಅವರಲ್ಲಿ 2,327 ಫಲಾನುಭವಿಗಳಿಗೆ ಉದ್ಯೋಗ ಲಭಿಸಿರುವುದು ಖಾತ್ರಿಯಾಗಿದೆ. ಹೀಗಾಗಿ ಈ ಫಲಾನುಭವಿಗಳು ಉದ್ಯೋಗ ಕಂಡುಕೊಂಡ ಕಾರಣ ಇವರಿಗೆ ಮಾಸಿಕ ಭತ್ಯೆಯನ್ನು ನಿಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಯೋಜನೆಯ ಫಲಾನುಭವಿಗಳಲ್ಲಿ ಬಳ್ಳಾರಿ ಜಿಲ್ಲೆಯ ಒಬ್ಬರು ಮರಣ ಹೊಂದಿದ್ದಾರೆ ಎಂದು ಸಹ ಸಚಿವರು ಇದೇ ವೇಳೆ ದೃಢಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *