ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ನೂತನ ಅಧ್ಯಕ್ಷ ವೆಂಕಟೇಶಪ್ರಸಾದ್ ಹೇಳಿದರು.
ಬುಧವಾರ ಬೆಳಗಾವಿಯ ಕ್ರಿಕೆಟ್ ಸ್ಟೇಡಿಯಂ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದರಿಂದ ಡಬ್ಲ್ಯೂಪಿಎಲ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ರದ್ದಾಗಿದ್ದವು ಎಂದು ಬೇಸರ ವ್ಯಕ್ತಪಡಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣವನ್ನು ಐಕಾನ್ ಗ್ರೌಂಡ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಲಾಗಿದೆ. ಈಗಾಗಲೇ ಭಾರತೀಯ ಕ್ರಿಕೆಟ್ ಮಂಡಳಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ವಿವರಣೆ ಕೇಳಿರುವುದಾಗಿ ತಿಳಿಸಿದರು.


