Menu

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್‌ ಸಿಎಂ: ಇಕ್ಬಾಲ್ ಹುಸೇನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್‌ ಬಣದ ಡಿನ್ನರ್​​ ಮೀಟಿಂಗ್​ ಬಗ್ಗೆ ಪ್ರತಿಕ್ರಿಯಿಸಿ,​ ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ. ಅಧಿವೇಶನ ಮುಗಿದ ತಕ್ಷಣ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.

ಗುರುವಾರ ನಡೆದದ್ದು ಮಾತ್ರ ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್‌ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು.

ಈ ಅಧಿವೇಶನ ಮುಗಿದ ಬಳಿಕ ಶಿವಕುಮಾರ್‌ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹ ಮುಖ್ಯ. ಅವಕಾಶ ಸಿಗದಿದ್ದರೆ ಹಣೆಯ ಬರಹಕ್ಕೆ ಹೊಣೆ ಯಾರು, ಭಗವಂತ ಏನು ಬರೆದಿದ್ದಾರೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್‌ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್‌ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತರ ಜೊತೆ ತಡರಾತ್ರಿ ಡಿನ್ನರ್ ಸಭೆ ನಡೆಸಿದ್ದಾರೆ. ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಗುರುವಾರ ರಾತ್ರಿ ಗಣಿ ಉದ್ಯಮಿ ದೊಡ್ಡಣ್ಣವರ್ ಫಾರ್ಮ್‌ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಕೆಶಿ ಸಭೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *