ಆಂಧ್ರಪ್ರದೇಶದ ಗುಂಟೂರಿನಲ್ಲಿ ಮಗಳು ಮಾದಕ ವ್ಯಸನಿ ಎಂಬುದನ್ನು ತಿಳಿದುಕೊಂಡ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮಗಳಿಗೆ ಡ್ರಗ್ಸ್ ಕೊಡುತ್ತಿದ್ದ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ತಾಯಿ ಆಘಾತಕ್ಕೊಳಗಾಗಿದ್ದರು.
ಮಗಳು ಓದುತ್ತಿದ್ದ ಕಾಲೇಜಿನಲ್ಲಿ ಓದುತ್ತಿರುವ ಹಿರಿಯ ವಿದ್ಯಾರ್ಥಿಯೊಬ್ಬ ಇನ್‌ಸ್ಟಾಗ್ರಾಮ್ ಮೂಲಕ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡ ಬಳಿಕ ಎರಡನೇ ವರ್ಷದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿರುವುದಾಗಿ ಮನವೊಲಿಸಿ ಮಾದಕ ವ್ಯಸನಿಯನ್ನಾಗಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯು ಬಾಲಕಿಯ ಒಪ್ಪಿಗೆಯಿಲ್ಲದೆ ಆಕೆಯ ಜೊತೆ ಅಶ್ಲೀಲವಾಗಿ ವರ್ತಿಸಿ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ತಾಯಿಯು ಮಗಳ ಮೊಬೈಲ್ ಫೋನ್ ಪರಿಶೀಲಿಸಿ ಫೋಟೊಗಳನ್ನು ಕಂಡು ಪ್ರಶ್ನಿಸಿದಾಗ ಸಮಸ್ಯೆ ಆರಂಭಗೊಂಡು ಜಗಳಕ್ಕೆ ಕಾರಣವಾಗಿದೆ. ಈ ಸಮಯದಲ್ಲಿ ಹುಡುಗಿ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ. ಮಗಳ ಮಾದಕ ವ್ಯಸನದ ಬಗ್ಗೆ ತಿಳಿದ ನಂತರ ಮಾನಸಿಕವಾಗಿ ಆಘಾತಕ್ಕೊಳಗಾದ ತಾಯಿ, ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆಯನ್ನು ಗುಂಟೂರು ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಟೂರು ಪೊಲೀಸ್ ವರಿಷ್ಠಾಧಿಕಾರಿ ರವಿಕೃಷ್ಣ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಮತ್ತು ಮಾದಕ ದ್ರವ್ಯಗಳನ್ನು ಪೂರೈಸುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಕುಲ್ ಜಿಂದಾಲ್ ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ಆಸ್ತಿಯನ್ನು ವಶಪಡಿಸಿಕೊಳ್ಳಲು ದೆಹಲಿಯ ಪೂರ್ವ ಭಾಗದಲ್ಲಿರುವ ಬೀಗ ಹಾಕಿದ
ಮನೆಯೊಂದಕ್ಕೆ ಹೋಗಿದ್ದ ಪೊಲೀಸರಿಗೆ ತಾಯಿ ಹಾಗೂ ಇಬ್ಬರು ಗಂಡುಮಕ್ಕಳು ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅನುರಾಧ ಕಪೂರ್, ಪುತ್ರರಾದ ಆಶಿಶ್ ಕಪೂರ್ ಮತ್ತು ಚೈತನ್ಯ ಕಪೂರ್ ಮನೆಯೊಳಗೆ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದನ್ನು ಕಂಡು ಪೊಲೀಸರು ಆಘಾತಕ್ಕೊಳಗಾದರು.
ಮನೆಯ ಕೋಣೆಯಲ್ಲಿ ಸುಸೈಡ್ ನೋಟ್ ಪತ್ತೆಯಾಗಿದೆ. ಮಾನಸಿಕ ತೊಂದರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸುತ್ತಮುತ್ತಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ.


