ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ.
ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ. 15 ರಂದು ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಬೆಂಗಳೂರಿನಿಂದ ಶಾಮನೂರರ ಪಾರ್ಥಿವ ಶರೀರ ದಾವಣಗೆರೆಗೆ ತರಲಾಗಿದೆ. ಮಧ್ಯಾಹ್ನ 12 ರ ವರೆಗೆ ಶಾಮನೂರ ಪುತ್ರ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಪಾರ್ಥಿವ ಶರೀರ ಇರಲಿದೆ. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಪೂಜೆ ಸಲ್ಲಿಸಲಿದ್ದು, ವಿವಿಐಪಿಗಳಿಗೆ ಮಾತ್ರ ದರ್ಶನಕ್ಕೆ ಅವಕಾಶವಿರಲಿದೆ. ಕ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲಿಂದ ಮೆರವಣಿಗೆ ಮೂಲಕ ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತರಲಾಗುತ್ತದೆ.
ಸಂಜೆ 5:30ಕ್ಕೆ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ತಂದೆ, ತಾಯಿ, ಸಹೋದರರು ಹಾಗೂ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಿವಶಂಕರಪ್ಪ ಅಂತ್ಯಸಂಸ್ಕಾರ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ಗಣ್ಯರು ಆಗಮಿಸಲಿದ್ದಾರೆ. ನೂರಕ್ಕೂ ಹೆಚ್ಚು ಪಂಚಪೀಠ ಮತ್ತು ವಿರಕ್ತಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.
ಗಣ್ಯರ ಸಂತಾಪ
ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾyಕ ಆರ್.ಅಶೋಕ ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ… pic.twitter.com/Dqa5UA2AJY— Siddaramaiah (@siddaramaiah) December 14, 2025
ಮಾಜಿ ಸಚಿವರು, ಹಿರಿಯ ಮುಖಂಡರು, ವೀರಶೈವ ಮಹಾಸಭೆಯ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶಾಮನೂರು ಶಿವಶಂಕರಪ್ಪನವರು ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು… pic.twitter.com/70FuQCkt1L
— R. Ashoka (@RAshokaBJP) December 14, 2025


