ಬಾಗಲಕೋಟೆಯ ನವನಗರದ 54ನೇ ಸೆಕ್ಟರ್ನಲ್ಲಿರುವ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ.
ಯಾವುದೇ ಪರವಾನಗಿ ಪಡೆಯದೆ ಈ ಶಾಲೆ ನಡೆಸುತ್ತಿರೆಂಬ ವಿಷಯ ಬಯಲಾಗಿದೆ. ಸರ್ಕಾರ ಕೂಡಲೇ ಶಾಲೆ ಮುಚ್ಚಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
ಬಾಲಕನ ಮೇಲೆ ಶಿಕ್ಷಕ ದಂಪತಿ ನೆಸಿದ್ದ ಅಮಾನವೀಯ ಹಲ್ಲೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ದೀಪಕ್ ರಾಠೋಡ್(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ಮಾಡಿದ್ದರೆ, ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿಗಿದ್ದರು.
ಆರೋಪಿ ದಂಪತಿಯ ಬಂಧಿಸಿರುವ ಪೊಲೀಸರು, ಸಹ ಶಿಕ್ಷಕರರಾದ ವಿಠಲ್ ಮತ್ತು ವಿಶಾಲ್ ಎಂಬವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. .ಬುದ್ಧಿಮಾಂದ್ಯ ಮಕ್ಕಳ ಮೇಲೆ ಹಿಂಸೆ ನಡೆಸಿ ಜಾತಿ ನಿಂದನೆ ಮಾಡಿದ ಆರೋಪದಡಿ ಈ ಶಾಲೆಯ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಾಲಕ ದೀಪಕ್ ಅಶೋಕ ರಾಠೋಡನ ತಂದೆ ಅಶೋಕ ರಾಠೋಡ ದೂರು ನೀಡಿದ್ದು, ಮೂರು ತಿಂಗಳ ಹಿಂದೆ ನಡೆದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿ ದ್ದಾರೆ. ಆರೋಪಿಗಳನ್ನು ವಸತಿ ಶಾಲೆಗೆ ಕರೆತಂದು ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.
ಶಾಲೆಗೆ ವಿಕಲಚೇತನ ಕಲ್ಯಾಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಭೇಟಿ ನೀಡಿದ್ದಾರೆ. ಶಾಲೆಯಲ್ಲಿ 40 ಮಕ್ಕಳಿದ್ದು ಬಾಲಮಂದಿರಕ್ಕೆ ಶಿಫ್ಟ್ ಮಾಡಲಾಗು ತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.
ಶಿಕ್ಷಕ ದಂಪತಿಗಳ ರಾಕ್ಷಸಿ ಕೃತ್ಯ ಬಹಿರಂಗವಾಗುತ್ತಿದ್ದಂತೆ ಶಾಲೆಯಲ್ಲಿದ್ದ ಕೆಲವು ಮಕ್ಕಳ ಪೋಷಕರು ಆಗಮಿಸಿ ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಪೋಷಕರು ಕಣ್ಣೀರು ಹಾಕುತ್ತಾ ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಕೃತ್ಯ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.


