ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ರೈತರಿಗೆ ಗಾಯವಾಗಿದೆ. ವಿಶ್ವ ರೈತ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನತ್ತ ತೆರಳುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ.
ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ 09ಕ್ಕೂ ಹೆಚ್ಚು ರೈತರ ಕೈಕಾಲು ಬೆನ್ನಿಗೆ ಗಂಭೀರ ಗಾಯವಾಗಿದ್ದು, ಬೈಲಹೊಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗದಗದಲ್ಲಿ ಅಗ್ನಿ ಅವಘಡ
ಗದಗ ನಗರದ ಶಾಂತಿ ಚಿತ್ರಮಂದಿರ ಅಗ್ನಿ ಅವಘಡದಲ್ಲಿ ಭಸ್ಮವಾಗಿದೆ. ಕುರ್ಚಿ, ಸ್ಪೀಕರ್, ಪಿಓಪಿ, ಫ್ಯಾನ್ ಸೇರಿದಂತೆ ಚಿತ್ರಮಂದಿರದಲ್ಲಿದ್ದ ಎಲ್ಲಾ ಪೀಠೋಪಕರಣ ಸುಟ್ಟು ಹೋಗಿದೆ. ಬೆಟಗೇರಿ ಬಡಾವಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು, ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


