ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 8 ಆರೋಪಿಗಳ ಪೈಕಿ ಒಬ್ಬರಾಗಿ ಬೆಂಗಳೂರಿನ ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಹಿಂದೆ ಸ್ಥಳೀಯ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದಾಗ ಬೆಳಗಾವಿ ಅಧಿವೇಶನದಿಂದ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಪುಣೆ ನಂತರ ಗೋವಾದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ.
ಬೈರತಿ ಬಸವರಾಜ್ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಸಿಐಡಿ ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.


