ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ.
ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ.
ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್ ಎಂಬವರನ್ನು ಗುರುತಿಸಲಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯ ಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.
ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ಸಿಂದ ಇಳಿದರೂ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಸಿಎಂ, ಡಿಸಿಎಂ, ಪ್ರಧಾನಿ ಸಂತಾಪ
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.
ಮೃತರ… pic.twitter.com/Ol4dR9ercB— Siddaramaiah (@siddaramaiah) December 25, 2025
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸಲ್ಲಿಸಿದ್ದಾರೆ.
ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೆರವು ನೀಡುವುದಾಗಿ ಹೇಳಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ.
— DK Shivakumar (@DKShivakumar) December 25, 2025


