ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ ಮೊಮ್ಮಗಳ 40 ದಿನದ ಮಗುವನ್ನು ಅಜ್ಜಿ ಕೊಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳಿಗೆ ಜನಿಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿದೆ. ಮೃತಪಟ್ಟ ವೇಳೆ ಮಗು ಅಜ್ಜಿ ಬಳಿ ಇತ್ತು. ಮಗು ಮೃತಪಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಅಜ್ಜಿ ವಾದಿಸಿಳು ಎನ್ನಲಾಗಿದೆ.ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಮೊಮ್ಮಗಳು ಚೇಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.
ಆಕೆಯ ದೂರಿನ ಆಧಾರದ ಮೇಲೆ ಬಿಎನ್ಎಸ್ 194 ಸೆಕ್ಷನ್ ಅಡಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಲಾಗಿದೆ. ಮಗುವಿನ ಮೃತದೇಹವನ್ನು ಹೊರತೆಗೆಯಲಾಗಿದ್ದು, ಚೇಳೂರು ತಹಶಿಲ್ದಾರ್ ಶ್ವೇತಾ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹಿಂದೂ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಮಗುವಿನ ಸಾವಿಗೆ ನಿಖರ ಕಾರಣ ಏನು, ಅಜ್ಜಿ ಹತ್ಯೆ ಮಾಡಿರುವುದೇ ಎಂಬುದನ್ನು ತಿಳಿಯಲು ಪೊಲೀಸರು ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ. ಬಳಿಕ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ.


