Menu

ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ

chikkaballapura news

ಚಿಕ್ಕಬಳ್ಳಾಪುರ: ಟಿಪ್ಪರ್​ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ನರಸಿಂಹಮೂರ್ತಿ (27), ನಂದೀಶ್ (25), ಅರುಣ್ (18), ಮನೋಜ್ (19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರು ಅಜ್ಜವಾರ ಗ್ರಾಮದವರು. ಇವರಲ್ಲಿ ನರಸಿಂಹಮೂರ್ತಿ ಮತ್ತು ನಂದೀಶ್ ಸಹೋದರರಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೃತ ಯುವಕರು ಒಂದೇ ಗ್ರಾಮದ ಯುವಕರು. ಒಂದೇ ಬೈಕ್​​ನಲ್ಲಿ ನಾಲ್ವರು ಯುವಕರು ಚಿಕ್ಕಬಳ್ಳಾಪುರದಿಂದ ಅಜ್ಜವಾರ ಗ್ರಾಮಕ್ಕೆ ಬರುತ್ತಿದ್ದರು, ಈ ವೇಳೆ ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರದತ್ತ ಟಿಪ್ಪರ್ ಬರುತ್ತಿತ್ತು. ಆಗ ಬೈಕ್ ಮತ್ತು ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿದೆ ಎಂದರು.

ರಸ್ತೆಯಲ್ಲಿ ಬಲಕ್ಕೆ ತೆಗೆದುಕೊಳ್ಳುವಾಗ ಟಿಪ್ಪರ್​ಗೆ ಬೈಕ್ ಡಿಕ್ಕಿ ಹೊಡೆದಿರುವ ಬಗ್ಗೆ ಮಾಹಿತಿ ಇದೆ. ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಸಂಚಾರಿ ನಿಯಮದ ಉಲ್ಲಂಘನೆಯಾಗಿದ್ದು, ತಪ್ಪು ಯಾರದ್ದು ಎಂಬುದರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಸ್​ಪಿ ಚೌಕ್ಸೆ ತಿಳಿಸಿದ್ದಾರೆ.

ಮೃತ ನಾಲ್ವರು ಒಂದೇ ಗ್ರಾಮದವರಾಗಿದ್ದು, ಒಂದೇ ಬೈಕ್​ನಲ್ಲಿ ಸಂಚರಿಸುತ್ತಿದ್ದರು. ಈ ನಾಲ್ವರಲ್ಲಿ ನಂದೀಶ್ ಮತ್ತು ನರಸಿಂಹನೂರ್ತಿ ಸಹೋದರರಿದ್ದಾರೆ. ನಾಲ್ವರು ಯುವಕರನ್ನು ಕಳೆದುಕೊಂಡ ಪೋಷಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

Related Posts

Leave a Reply

Your email address will not be published. Required fields are marked *