ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡು ಕೋಟಿ ರೂ. ಮೌಲ್ಯದಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಡಾ. ಶಿವಮೂರ್ತಿ ಮುರುಘಾ ಶರಣ ಮಾರಾಟ ಮಾಡಿದ್ದಾ ರೆಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಮಠದ ಆಡಳಿತ ಸಮಿತಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಮಠದ ಹಾಸ್ಟೆಲ್ನ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಆರೋಪದಡಿ ಒಂದು ಪೋಕ್ಸೋ ಪ್ರಕರಣದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿದೆ. ಈಗ ಅವರ ವಿರುದ್ಧ ಮಠದ ಆಸ್ತಿ ಮಾರಾಟದ ಗಂಭೀರ ಆರೋಪ ಕೇಳಿಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ ಎರಡು ಕೋಟಿ ರೂ. ಮೌಲ್ಯದ ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬವರಿಗೆ ಸ್ಪೆಷಲ್ ಜಿಪಿಎ ನೀಡಿ ಮಾರಾಟ ಮಾಡಲಾಗಿದೆ. ಈ ಬಗ್ಗೆ ಪ್ರಕಾಶ್ ಎಂಬವರು ಮಠದ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ಗೆ ದೂರು ನೀಡಿದ್ದಾರೆ. ಕಾನೂನು ತಜ್ಞರಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಠದ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ ಹೇಳಿದ್ದಾರೆ.


