ಉನ್ನಾವೊದಲ್ಲಿ 2017ರಲ್ಲಿ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಸೆಂಗಾರ್ಗೆ ನಾಲ್ಕು ವಾರಗಳ ನೋಟಿಸ್ ಜಾರಿಗಒಳಿಸಿ, ಸಂತ್ರಸ್ತೆಯೂ ಮಧ್ಯಪ್ರವೇಶಿಸಲು ಅವಕಾಶ ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ರದ್ದಾಗಿದ್ದರೂ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್ಗೆ 10 ವರ್ಷ ಶಿಕ್ಷೆಯಾಗಿದೆ. ಹೀಗಾಗಿ ಆತ ಜೈಲಿನಲ್ಲಿಯೇ ಇರಬೇಕು ಎಂದು ಹೈಕೋರ್ಟ್ ಹೇಳಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿ ಜಾಮೀನು ನೀಡಿತ್ತು. ಇದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಅಪರಾಧ ಸಾಬೀತಾಗಿ ಶಿಕ್ಷೆಗೆ ಗುರಿಯಾಗಿರುವ ಪ್ರಭಾವಿಗೆ ಜಾಮೀನು ನೀಡಿರುವುದು ಮಾತ್ರವಲ್ಲದೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದು ತೀವ್ರ ವಿವಾದಕ್ಕೆ ದಾರಿ ಮಾಡಿ ಕೊಟ್ಟಿತ್ತು. ಸಂತ್ರಸ್ತೆಯ ತಂದೆಯ ಪೊಲೀಸ್ ಕಸ್ಟಡಿ ಪ್ರಕರಣದಲ್ಲಿ ಸೆಂಗರ್ ಅಪರಾಧಿ. ಸಂರಸ್ತೆ ಮತ್ತು ಕುಟುಂಬದ ರಕ್ಷಣೆಯ ಪ್ರಶ್ನೆ ಮುಂದಿಟ್ಟು ಸಂತ್ರಸ್ತೆ ಕುಟುಂಬ ಮತ್ತು ಮಹಿಳಾಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರೂ ನಡೆಸಿದ್ದರು.
ಸಿಬಿಐ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು, ಸುಪ್ರೀಂಕೋರ್ಟ್ ಸಿಬಿಐ ಅರ್ಜಿಯನ್ನು ಪರಿಶೀಲಿಸಿ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.
ಮಹಿಳಾಪರ ಹೋರಾಟಗಾರ್ತಿ ಯೋಗಿತಾ ಭಯಾನ, ಸುಪ್ರೀಂ ಕೋರ್ಟ್ ಮತ್ತು ಮಾಧ್ಯಮಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಿ ತೀರ್ಪು ನೀಡಿದೆ. ಅನ್ಯಾಯವನ್ನು ದೃಢತೆಯಿಂದ ಎದುರಿಸಿದರೆ ನ್ಯಾಯ ಸಿಗುತ್ತದೆ ಎಂಬ ಸಂದೇಶವನ್ನು ದೇಶದ ಹೆಣ್ಣುಮಕ್ಕಳಿಗೆ ರವಾನಿಸಿದೆ ಎಂದಿದ್ದಾರೆ.


