ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್ ಮಾಡಲಾಗಿದೆ.
ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರರಿಂದ ಆದೇಶ ಹೊರಡಿಸಿದ್ದಾರೆ.
ಕುಡಿದು ಪ್ರವಾಸಿಗರ ಮೋಜು ಮಸ್ತಿ ಮಾಡೋದನ್ನು ತಡೆಯುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಹೊಸವರ್ಷದ ಆಚರಣೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಪ್ರವಾಸಿತಾಣಗಳಿಗೆ ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ.
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ಸ್ಥಾಳಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಪ್ರವಾಸಿತಾಣಗಳಲ್ಲಿ ಪಾರ್ಟಿ, ನ್ಯೂ ಇಯರ್ ಆಚರಣೆಗೂ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.
ಮೃಗಾಲಯ ಓಪನ್
ಕ್ರಿಸ್ ಮಸ್ ಮತ್ತು ಹೊಸವರ್ಷಾಚರಣೆ ರಜೆ ಹಿನ್ನೆಲೆಯಲ್ಲಿ ಮಂಗಳವಾರವೂ ಬನ್ನೇರುಘಟ್ಟ ಮೃಗಾಲಯ ಓಪನ್ ಇರಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಝೂಗೆ ಭೇಟಿ ನೀಡುವ ಸಾಧ್ಯತೆ ಹಿನ್ನಲೆ ವಾಡಿಕೆಯ ರಜೆ ದಿನವೂ ತೆರೆದಿರಲಿದೆ.


