ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೆಮಿಯನ್ ಮಾರ್ಟಿನ್ ಕೋಮಾಗೆ ಜಾರಿದ್ದಾರೆ.
ಆಸ್ಟ್ರೇಲಿಯಾ ಪರ 208 ಏಕದಿನ ಮತ್ತು 67 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ 54 ವರ್ಷದ ಡೇಮಿಯನ್ ಮಾರ್ಟಿನ್ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಮಾಗೆ ಜಾರಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಡೇಮಿಯನ್ ಮಾರ್ಟಿನ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಕ್ರಿಕೆಟ್ ಸಮುದಾಯ ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಆಡಂ ಗಿಲ್ ಕ್ರಿಸ್ಟ್, ಮಾರ್ಟಿನ್ ಗೆ ಅತ್ಯುತ್ತಮವಾದ ಚಿಕಿತ್ಸೆ ನೀಡಲಾಗುತ್ತಿದೆ. ಶೀಘ್ರ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
21ನೇ ವಯಸ್ಸಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದ ಡೆಮಿಯನ್ ಮಾರ್ಟಿನ್, 1992-93ರಲ್ಲಿ ಡೀನ್ ಜೊನ್ಸ್ ನಂತರ ಅವರ ಸ್ಥಾನ ತುಂಬಿದರು. ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದರು.
ಟೆಸ್ಟ್ ನಲ್ಲಿ 13 ಶತಕ ಸಿಡಿಸಿದ ಮಾರ್ಟಿನ್ 2005ರಲ್ಲಿ ನ್ಯೂಜಿಲೆಂಡ್ ವಿರುದ್ಧ 165 ರನ್ ಗಳಿಸಿರುವುದು ವೈಯಕ್ತಿಕ ಗರಿಷ್ಠ ಸಾಧನೆಯಾಗಿದೆ. 2006-07ರಲ್ಲಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ನಂತರ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


