Thursday, January 01, 2026
Menu

ಹಣ ಕೊಡದಿದ್ದರೆ ಸುಸೈಡ್‌: ತಾಯಿಯ ಬೆದರಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಹಣ ಕೊಡದಿದರೆ ಆತ್ಮಹತ್ಯೆ ಮಾಡಿಕೊಳ್ಳುವೆನೆಂದು ತಾಯಿಯನ್ನು ಬೆದರಿಸಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ಯುವಕ, ಹುಚ್ಚಾದಿಂದ ಈತ ಪ್ರಾಣ ಕಲೆದುಕೊಂಡಿದ್ದು, ತಾಯಿ ಹಾಗೂ ಕುಟುಂಬ ಕಣ್ಣೀರಿಡುವಂತಾಗಿದೆ.

\ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ಕೊಡುವಂತೆ ಕೇಳಿದ್ದ, ಆಕೆ ಕೊಡುವುದಿಲ್ಲ ಎಂದಾಗ, ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿ ನೇಣಿನ ಕುಣಿಕೆಯತ್ತ ಹೋಗಿ ಆಕಸ್ಮಿಕವಾಗಿ ಕೊರಳು ಸಿಲುಕಿ ಮೃತಪಟ್ಟಿದ್ದಾನೆ. ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ ವಿಜಯ್​​ಕುಮಾರ್​​ಗೆ ಮದುವೆ ಮಾಡಬೇಕೆಂದು ತಾಯಿ ಬಯಸಿದ್ದರು. ಚೆನ್ನಾಗಿ ಮಾತನಾಡುತ್ತಾ ತಮಾಷೆಯ ಸ್ವಭಾವ ಹೊಂದಿದ್ದ ವಿಜಯ್​​ ಮದ್ಯಪಾನ ಮಾಡಿ ಬಂದಿದ್ದಕ್ಕೆ ತಾಯಿ ಬೈದಿದ್ದರು. ಆಕೆಯನ್ನು ತಮಾಷೆಗೆ ಹೆದರಿಸಲು ಹೋಗಿ ವಿಜಯ್​​ ನೇಣಿನ ಕುಣಿಕೆಗೆ ಸಿಲುಕಿದ್ದು, ಮನೆಯವರಿಗೆ ಗಮನಕ್ಕೆ ಬರುವಷ್ಟರಲ್ಲಿ ಪ್ರಾಣ ಹೋಗಿತ್ತು. ಹೆತ್ತವರ ಬಳಿ ಇದೇ ರೀತಿ ಹಿಂದೆಯೂ ಹಲವು ಬಾರಿ ಈತ ತಮಾಷೆ ಮಾಡಿದ್ದು, ಸಾವಿನ ವಿಚಾರದಲ್ಲಿ ತಮಾಷೆ ಮಾಡಬೇಡ ಎಂದು ತಾಯಿ ಬುದ್ಧಿ ಹೇಳಿದ್ದರು.

Related Posts

Leave a Reply

Your email address will not be published. Required fields are marked *