Thursday, January 01, 2026
Menu

ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ

ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು.  ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆಪಾತ್ರರಾಗಿದ್ದರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ  ಅವರ ಮಗ ಡಾ. ಎನ್. ವಿನಯ ಹೆಗ್ಡೆ ಮಂಗಳೂರಿನ ಸಂತ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದರು. ತಂದೆಯ ಆಶಯದಂತೆ 1979 ರಲ್ಲಿ ‘ನಿಟ್ಟೆ ಎಜುಕೇಷನ್ ಟ್ರಸ್ಟ್’ ಸ್ಥಾಪನೆ ಮಾಡಿದ್ದರು. ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ. ವಿನಯ ಹೆಗ್ಡೆ ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು.  ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಧ್ಯಾಹ್ನ 3 ಗಂಟೆಯವರಿಗೆ ಶಿವಬಾಗ್ ನಲ್ಲಿರುವ ಅವರ ನಿವಾಸ ಸದಾನಂದದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಮಧ್ಯಾಹ್ನ 4. 30 ರಿಂದ ಸಂಜೆ 6 ಗಂಟೆಯವರಿಗೆ ನಿಟ್ಟೆ ಕ್ಯಾಂಪಸ್ ನಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Related Posts

Leave a Reply

Your email address will not be published. Required fields are marked *