ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ.
ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು ಎಲ್ಲರೂ ಸೇರಿ ಗೋವಾದಲ್ಲಿ ನ್ಯೂ ಇಯರ್ ಪಾರ್ಟಿ ಮಾಡಿದ್ದರು.
ಜ.1 ರಂದು ತಿಂಡಿ ಮುಗಿಸಿದ ರಕ್ಷಿತ್, ಚಿದಂಬರಂ ಹಾಗೂ ಪ್ರವೀಣ್ ಗೋವಾದಲ್ಲಿ ತಿರುಗಾಡುತ್ತಿರುವಾಗ ರಕ್ಷಿತ್ಗೆ ಹೃದಯಾಘಾತವಾಗಿದೆ. ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಗೋವಾದಿಂದ ಸ್ವಗ್ರಾಮಕ್ಕೆ ಮೃತದೇಹ ತರಲಾಗಿದೆ.


