Wednesday, January 07, 2026
Menu

ಬಾಲಕನ ಮೇಲೆ ಆಟೊ ಚಾಲಕನಿಂದ ನಿರಂತರ ಲೈಂಗಿಕ ದೌರ್ಜನ್ಯ

ಹದಿಮೂರು ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಅರುವತ್ತು ವರ್ಷದ ಆಟೊ ಚಾಲಕನನ್ನು ಕೇರಳದ ನೆಡುಮಂಗಾಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಿಂದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ.

ನೆಡುಮಂಗಾಡ್‌ನ ಶಿಯಾದ್ ಮೊಯ್ದೀನ್ ಎಂಬ ಆಟೋ ಚಾಲಕ ಅಕ್ಟೋಬರ್‌ನಿಂದಲೂ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಪತ್ತಮಕಲ್ಲುವಿನ ಮೈದಾನದಲ್ಲಿ ಸೈಕಲ್ ಕಲಿಯಲು ಬರುತ್ತಿದ್ದ ಬಾಲಕನೊಂದಿಗೆ ಮೊದಲು ಸ್ನೇಹ ಬೆಳೆಸಿದ ನಂತರ ಆತನನ್ನು ತನ್ನ ಆಟೋದಲ್ಲಿ ಖಾಲಿ ಹೊಲವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಘಟನೆಯ ಬಳಿಕ ಬಾಲಕನಿಗೆ 10 ರೂಪಾಯಿ ನೀಡಿ, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ.

ಬಾಲಕನಿಗೆ ಬೆದರಿಕೆ ಹಾಕಿದ್ದ ಆರೋಪಿ ಇದನ್ನೇ ಬಂಡವಾಳ ಮಾಡಿಕೊಂಡು ಬಾಲಕನಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದನು. ಖಾಲಿ ಹೊಲವೊಂದರಲ್ಲಿ ಆಟೋ ನಿಂತಿದ್ದನ್ನು ಕಂಡು ಅನುಮಾನಗೊಂಡ ಸ್ಥಳೀಯರು ಸ್ಥಳಕ್ಕೆ ತೆರಳಿದಾಗ ಶಿಯಾದ್‌ನ ಕೃತ್ಯ ಬಯಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದ ಆಟೋ ಚಾಲಕನನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ವಿಚಾರಣೆ ನಡೆಸಿದಾಗ ಆರೋಪಿಯು ತನಗೆ ಪದೇಪದೆ ಕಿರುಕುಳ ನೀಡುತ್ತಿದ್ದ ಬಗ್ಗೆ ಹೇಳಿಕೆ ನೀಡಿದ್ದಾನೆ. ಪೊಲೀಸರು ಆರೋಪಿ ಶಿಯಾದ್ ಮೊಯ್ದೀನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *