ತೆಲಂಗಾಣದಲ್ಲಿ ಮಹಿಳೆಯೊಬ್ಬರು ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತಾ(29) ಆತ್ಮಹತ್ಯೆ ಮಾಡಿಕೊಂಡವರು.
ಮೃತ ಮಹಿಳೆ. ಆಕೆ ನಾಲ್ಕು ವರ್ಷಗಳ ಹಿಂದೆ ಪತಿ ಲಕ್ಷ್ಮಣ್ ಅವರನ್ನು ಕಳೆದುಕೊಂಡಿದ್ದು, ಏಳು ವರ್ಷ ಹಾಗೂ ಮೂರೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಆಕೆ ದಿನಗೂಲಿ ಮಾಡಿ ಕುಟುಂಬವನ್ನು ಪೋಷಿಸುತ್ತಿದ್ದರು.
ಮಕ್ಕಳನ್ನು ಟ್ಯಾಂಕ್ ಬಂಡ್‌ಗೆ ಕರೆತಂದು ಆಟವಾಡಲು ಮೊಬೈಲ್ ಫೋನ್ ನೀಡಿ ನಂತರ ವಸಂತಾ ಹುಸೇನ್ ಸಾಗರ್ ಸರೋವರಕ್ಕೆ ಹಾರಿದ್ದಾರೆ. ಸ್ಥಳದಲ್ಲಿದ್ದ ಕೆಲವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀರು ಬಂದು ಮೃತದೇಹವನ್ನು ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಮಕ್ಕಳ ಬಳಿ ಇದ್ದ ಮೊಬೈಲ್ ಬಳಸಿ ಮಹಿಳೆಯನ್ನು ಗುರುತಿಸಿ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹೆಂಡತಿಯ ಕೊಂದು ಗಂಡ ಆತ್ಮಹತ್ಯೆ
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕೌಟುಂಬಿಕ ಕಲಹದ ಕಾರಣ ಪತ್ನಿಯನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ ಕುಮಾರ್ ಪತ್ನಿ ವತ್ಸಲಾರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಏಳು ವರ್ಷದ ಹೆಣ್ಣು ಮಗುವಿದೆ.
ಸಣ್ಣಪುಟ್ಟ ವಿಚಾರಕ್ಕೆ ಜಗಳವಾಡುತ್ತಿದ್ದ ದಂಪತಿ ಪೊಲೀಸ್ ಠಾಣೆಗೂ ಹೋಗಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ಹೋಗಿ ಈ ದುರಂತ ನಡೆದಿದೆ. ಹೆಂಡತಿಯನ್ನು ಕೊಂದು ಫ್ಯಾನ್ಗೆ ನೇಣುಬಿಗಿದುಕೊಂಡು ವಸಂತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


