Thursday, January 08, 2026
Menu

ಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲೆಸೆತ: ನಾಲ್ವರು ಬಾಲಕರ ಬಂಧನ

ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ನಾಲ್ಕು ಬಾಲಕರನ್ನು ಬಂಧಿಸಲಾಗಿದೆ.

ವಿ.ಎಸ್ ಗಾರ್ಡಡ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ವರದರಾಜು ಎಂಬವರ ಮಗಳ ತಲೆಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲಿಗೆ ಗಾಯವಾಗಿದೆ. ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.

ಓಂ ಶಕ್ತಿ ಮಾಲಾಧಾರಿಗಳು ಮತ್ತು ಸ್ಥಳೀಯರು ಜೆ.ಜೆ ನಗರ ಠಾಣೆ ಮುಂದೆ ಜಮಾಯಿಸಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಕಲ್ಲು ತೂರಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅವರನ್ನೆಲ್ಲ ಬಂಧಿಸಲಾಗಿದೆ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಬಂಧಿಸಲಾಗಿದೆ, ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹಸಚಿವರು ಹೇಳಿದ್ದಾರೆ. ಅನ್ಯ ಕೋಮಿನವವರು ಕಲ್ಲು ಎಸೆದಿರುವ ಆರೋಪ ಕೇಳಿ ಬಂದಿದೆ.

Related Posts

Leave a Reply

Your email address will not be published. Required fields are marked *