ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ.
೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ.
ಜ.೨೫ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.