Menu

ಪತ್ನಿಯ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆಸೆದ ನಿವೃತ್ತ ಸೈನಿಕ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್​ನಲ್ಲಿ ಹಾಕಿ ಬೇಯಿಸಿರುವ ಪ್ರಕರಣ ಬಯಲಾಗಿದೆ.

ಜನವರಿ 18ರಂದು ರಾಚಕೊಂಡ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಮೀರಪೇಟ್ ಪೊಲೀಸ್ ಠಾಣೆಗೆ ತಮ್ಮ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ನಿವೃತ್ತ ಸೈನಿಕ ಗುರುಮೂರ್ತಿ ದೂರು ನೀಡಿದ್ದರು. ತನಿಖಾಧಿಕಾರಿಗಳು ಗುರುಮೂರ್ತಿಯನ್ನು ವಿಚಾರಣೆಗೊಳಪಡಿಸಿದಾಗ ಮಾಡಿರುವ ಅಪರಾಧವನ್ನು ಒಪ್ಪಿಕೊಂಡರು ಮತ್ತು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದರು. ಪತ್ನಿಯನ್ನು ಕೊಲೆ ಮಾಡಿ ಶವವನ್ನು ತುಂಡು ಮಾಡಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿ ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದರುವುದಾಗಿ ಪೊಲೀಸರಿಗೆ ವಿವರಿಸಿದ್ದಾರೆ.

ಪೊಲೀಸರು ಆರೋಪಿಯ ಹೇಳಿಕೆ ದಾಖಲಿಸಿಕೊಂಡು ಸಾಕ್ಷ್ಯ ಸಂಗ್ರಹಿಸಲು ಆರಂಭಿಸಿದ್ದು, ಕೆರೆಯಲ್ಲಿ ಸಂತ್ರಸ್ತೆಯ ದೇಹದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಗುರುಮೂರ್ತಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತರಾದ ನಂತರ ಕಾಂಚನ್ ಬಾಗ್‌ನಲ್ಲಿರುವ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಗುರುಮೂರ್ತಿ 13 ವರ್ಷಗಳ ಹಿಂದೆ ಮಾಧವಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಹೆಂಡತಿಯನ್ನು ಕೊಂದ ನಂತರ ಆರೋಪಿಯು ಹೆತ್ತವರೊಂದಿಗೆ ಮೀರ್‌ಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *