Menu

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ.

ಪೊಲೀಸ್ ಬಂಧನದ ಸಮಯದಲ್ಲಿ ಮಹಿಳೆಯೊಬ್ಬರು ಅತ್ಯಂತ ಸಂಕಷ್ಟದ ಮತ್ತು ಅವಮಾನಕರ ಸ್ಥಿತಿಯಲ್ಲಿರುವ ದೃಶ್ಯಗಳು ಹೊರಬಂದಾಗ, ಒಂದು ಜವಾಬ್ದಾರಿಯುತ ಸರ್ಕಾರ ಸಂವೇದನಾಶೀಲತೆಯಿಂದ ಪಾರದರ್ಶಕವಾಗಿ ನ್ಯಾಯವನ್ನು ಒದಗಿಸುವ ಮಾಡಬೇಕಿತ್ತು. ಆದರೆ ಲಜೆಗೆಟ್ಟ ಕಾಂಗ್ರೆಸ್ ಸರ್ಕಾರ ಮಾಡಿದ್ದು, ನಿರಾಕರಣೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಲಘುವಾಗಿ ಕಾಣುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾಂವಿಧಾನಿಕ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಅದರ ಮೂಲಭೂತ ಕರ್ತವ್ಯವಾದ ನಾಗರೀಕರ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಬಗ್ಗೆ ನೆನಪಿಸುವಂತಹ ಪರಿಸ್ಥಿತಿ ಬಂದಿರುವುದು ಅತ್ಯಂತ ದುರದೃಷ್ಟಕರ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ, ನ್ಯಾಯಯುತ ಮತ್ತು ಕಾಲಮಿತಿಯ ತನಿಖೆ ನಡೆಸುವಂತೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಮತ್ತು ಸಂತ್ರಸ್ತೆಗೆ ಸೂಕ್ತ ಪರಿಹಾರ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವು (NCW) ತಾಕೀತು ಮಾಡಿರುವುದು ಅತ್ಯಂತ ನ್ಯಾಯಯುತ ಮತ್ತು ಸ್ವಾಗತಾರ್ಹ ಎಂದಿದ್ದಾರೆ.

ಕಾನೂನು ಜಾರಿ ಸಂಸ್ಥೆಗಳು ಕಾನೂನನ್ನು ಎತ್ತಿ ಹಿಡಿಯಲು ಇವೆಯೇ ಹೊರತು, ಅಧಿಕಾರದ ದುರುಪಯೋಗ ಅಥವಾ ಅಹಂಕಾರದ ಮೂಲಕ ಸಾರ್ವಜನಿಕ ವಿಶ್ವಾಸಕ್ಕೆ ಚ್ಯುತಿ ತರುವ ಕೆಲಸ ಮಾಡೋದಕ್ಕಾಗಿ ಅಲ್ಲ. @INCKarnataka ಸರ್ಕಾರ ಕುಂಟು ನೆಪ, ಸಬೂಬುಗಳನ್ನು ಕೊಡುವುದು ಬಿಟ್ಟು, ತನ್ನ ವೈಫಲ್ಯದ ಜವಾಬ್ದಾರಿಯನ್ನು ಹೊರಬೇಕು. ಇಡೀ ರಾಜ್ಯವೇ ತಲೆತಗ್ಗಿಸುವ ಇಂತಹ ಘಟನೆ ಏಕೆ ಸಂಭವಿಸಿತು, ಕಾನೂನು ಮತ್ತು ನಿಯಮಗಳನ್ನು ಏಕೆ ಪಾಲಿಸಲಿಲ್ಲ ಮತ್ತು ಸಂವಿಧಾನಿಕ ಆಯೋಗವೊಂದು ಮಧ್ಯಪ್ರವೇಶಿಸುವ ಅಗತ್ಯ ಏಕೆ ಬಂತು ಎಂಬುದಕ್ಕೆ ರಾಜ್ಯ ಸರ್ಕಾರ ಕರ್ನಾಟಕದ ಜನತೆಗೆ ಉತ್ತರ ನೀಡಲೇಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.

ಏನಿದು ಘಟನೆ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸ್ ಹಲ್ಲೆ ಮತ್ತು ಬಟ್ಟೆ ಹರಿದ ಆರೋಪ ಕೇಳಿ ಬಂದಿ ಹಿನ್ನೆಲೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಕರ್ನಾಟಕ ಡಿಜಿಪಿಗೆ ಪತ್ರ ಬರೆದು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ. ಸಂತ್ರಸ್ತೆಗೆ ಬೆಂಬಲ ನೀಡುವಂತೆ ಮತ್ತು 5 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆಯೋಗ ಒತ್ತಾಯಿಸಿದೆ.

ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಆಯೋಗ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವೀಡಿಯೊ ವೈರಲ್ ಆದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆತಿ ವಿಜಯಾ ರಹಾಟ್ಕರ್ ಘಟನೆಯನ್ನು ಖಂಡಿಸಿದ್ದಾರೆ.

ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ ಆಯೋಗ 5 ದಿನಗಳ ಒಳಗೆ ವಿವರವಾದ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.

ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ, ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾಗಿ ಎಂದು ಗೃಹ ಸಚಿವ ಸಚಿವ ಪರಮೇಶ್ವರ್ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *