Menu

ಮನರೇಗಾ ಉಳಿಸಲು ಜ.26 ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ: ಡಿಕೆ ಶಿವಕುಮಾರ್

dk shivakumar

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

“ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು” ಎಂದು ವಿವರಿಸಿದರು.

ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ” ಎಂದರು.

ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ” ಎಂದರು.

ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, “ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ” ಎಂದರು.

Related Posts

Leave a Reply

Your email address will not be published. Required fields are marked *