ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್ಪಿ ವೈಷ್ಣವಿ ಹಾಗೂ ಕುಟಂಬಸ್ಥರ ಕಾರು ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಪೊಲೀಸ್ ಅಧಿಕಾರಿ ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿವೈಎಸ್‌ಪಿ ವೈಷ್ಣವಿ ತಾಯಿಕಮಲ ಹರಿಬಾಬು ಹಾಗೂ ಕಾರು ಚಾಲಕ ರಾಕೇಶ್ ಮೃತಪಟ್ಟವರು.
ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಲಾಪರಕ್ಕೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರನವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.


