Menu

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ.

ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ ಸಲಹೆ ಮೇರೆಗೆ ಊಟ ನೀಡಬೇಕು ಎಂದು ತಿಳಿಸಿದೆ.

ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜು, ಲಕ್ಷ್ಮಣ್ ಜೈಲಿನಲ್ಲಿ ಒಳ್ಳೆಯ ಊಟ ಇಲ್ಲ, ಅನಾರೋಗ್ಯ ಉಂಟಾಗುತ್ತಿದೆ. ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮೂವರಿಗೆ ದಿನಕ್ಕೊಂದು ಬಾರಿ ಮನೆಯೂಟ ನೀಡಲು ಅವಕಾಶ ನೀಡಿತ್ತು. ಆದರೆ ಕಾರಾಗೃಹ ಇಲಾಖೆಯ ಅಧಿಕಾರಿಗಳು, ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟ ನೀಡಿದರೆ ಮುಂದೆ ಎಲ್ಲಾ ಆರೋಪಿಗಳು ಇದೇ ಆದೇಶದ ಮೇಲೆ ಮನೆ ಊಟವನ್ನು ಕೇಳುವ ಸಾಧ್ಯತೆ ಇದೆ, ಮನೆ ಊಟ ನೀಡುವುದಿಲ್ಲ ಎಂದು ತಿಳಿಸಿದ್ದರು.

ಮನೆ ಊಟ ಬಂದರೆ ಪರಿಶೀಲನೆ ಮಾಡಿದ ಬಳಿಕ ಜೈಲಿನ ಒಳಗೆ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ತಂಡ ಬೇಕಾಗುತ್ತದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಮೂರು ಸಾವಿರ ಆರೋಪಿಗಳು ಇದೇ ಆದೇಶದನ್ವಯ ಅರ್ಜಿ ಹಾಕಿದರೆ ಕಷ್ಟ ಆಗುತ್ತದೆ. ಹೀಗಾಗಿ ಮನೆ ಊಟ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಆರೋಪಿ ಪವಿತ್ರಗೌಡ ಪರ ವಕೀಲ ನಾರಾಯಣಸ್ವಾಮಿ ನ್ಯಾಯಾಲಯಕ್ಕೆ ಪುನಃ ಅರ್ಜಿ ಸಲ್ಲಿಸಿ, ಪವಿತ್ರಗೌಡ ಜೈಲೂಟ ಕಾರಣ ಚರ್ಮರೋಗದಿಂದ ಬಳಲುತ್ತಿದ್ದಾರೆ. ಮೈಮೇಲೆ ಗುಳ್ಳೆಗಳು ಆಗುತ್ತಿದೆ. ಫುಡ್‌ಪಾಯಿಸನ್ ಕೂಡ ಆಗ್ತಿದೆ ಎಂದು ವಾದ ಮಂಡಿಸಿದ್ದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಮಂಗಳವಾರ ಅಂದರೆ ನಾಳೆ ವಿಚಾರಣೆಗೆ ಕೋರ್ಟ್‌ಗೆ ಹಾಜರಾಗಬೇಕಿದೆ.

Related Posts

Leave a Reply

Your email address will not be published. Required fields are marked *