Menu

ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ ಇದೆ. ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಹುಲ್ ಗಾಂಧಿ ಜೊತೆ ರಾಜಕೀಯ ಚರ್ಚೆ ನಡೆಸಿಲ್ಲಮೈಸೂರಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.

ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ.ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ.  ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.

Related Posts

Leave a Reply

Your email address will not be published. Required fields are marked *