Menu

ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್

“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು ಕೇಳಿದಾಗ, “ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ” ಎಂದು ಹೇಳಿದರು.

ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ” ಎಂದರು.

ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ” ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *