ಬಾಗಲಕೋಟೆ: ಏಕಾಏಕಿ ಅಧಿವೇಶನ ಕರೆದಿರುವ ಸಿಎಂ ಸಿದ್ದರಾಮಯ್ಯನವರಿಂದ ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ವಿರುದ್ಧ ರಾಜ್ಯದ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಹಾಗೂ ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಅಧಿವೇಶನ ಕರೆಯಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ದೂರಿದರು.
ಪ್ರಧಾನಿ ಮೋದಿಯವರ ನ್ಯಾಷನಲ್ ಎಜ್ಯುಕೇಶನ್ ಪಾಲಸಿಯನ್ನು ಸಿಎಂ ಸಿದ್ದರಾಮಯ್ಯ ವಿರೋಧಿಸಿದರು. ಸ್ಟೇಟ್ ಎಜ್ಯುಕೇಶನ್ ಪಾಲಸಿ ತರುತ್ತೇವೆ ಎಂದೂ ಹೇಳಿ ಅದನ್ನು ತರಲಿಲ್ಲ ಎಂದು ದೂರಿದರು.
ಗೊಂದಲ ಸರಿಪಡಿಸುತ್ತೇವೆ: ಬಾಗಲಕೋಟೆ ಮತಕ್ಷೇತ್ರದ ಉಪಚುನಾವಣೆ ವಿಚಾರ ಹಾಗೂ ಜಿಲ್ಲಾ ಬಿಜೆಪಿಯಲ್ಲಿನ ಭಿನ್ನಮತದ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಪಕ್ಷದಲ್ಲಿನ ಸಣ್ಣಪುಟ್ಟ ಗೊಂದಲಗಳನ್ನು ಸರಿಪಡಿಸುತ್ತೇವೆ. ದಾವಣಗೆರೆ ಉಪಚುನಾವಣೆ ಕುರಿತು ಸಭೆ ನಡೆಸುತ್ತೇವೆ. ಮತದಾರರು ಬಿಜೆಪಿ ಪರವಾಗಿದ್ದು, ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ತಿಳಿಸಿದರು.


