Menu

2 ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಸಚಿವ ಬೈರತಿ ಸುರೇಶ್

byrati suresh

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಗೋಪಾಲ ರಾಮ ನಾರಾಯಣ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪೂರ್ವ ಕಿಟ್, ಫಲಾನುಭವಿ ವಿಕಲಚೇತನರಿಗೆ ವ್ಹೀಲ್ ಚೇರ್ ಮತ್ತು ಸಾಧನ ಸಲಕರಣೆಗಳನ್ನು ವಿತರಣೆ ಮಾಡಿ ಅವರು ಈ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಬ್ಬಾಳ ಕ್ಷೇತ್ರದ ಜನರ ಅನುಕೂಲಕ್ಕೆ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 75 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ಈ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಮುಂದಿನ ಎರಡು ವರ್ಷದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಕಿವಿಮಾತು

ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದವರು, ಬಡವರು, ಮಧ್ಯಮವರ್ಗದವರು ಮತ್ತು ಅಲ್ಪಸಂಖ್ಯಾತರ ಹಿತರಕ್ಷಣೆ ಮಾಡುತ್ತಿದೆ. ಇದಕ್ಕಾಗಿ ವಾರ್ಷಿಕ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಈ ಹಣ ರಾಜ್ಯದ ಜನತೆಯ ತೆರಿಗೆ ಹಣವಾಗಿದ್ದು, ಇದನ್ನು ಆ ಜನರ ಶ್ರೇಯೋಭಿವೃದ್ಧಿಗಾಗಿಯೇ ಖರ್ಚು ಮಾಡಬೇಕು. ಹೀಗಾಗಿ ಯಾವುದೇ ನಿರ್ಲಕ್ಷ್ಯ ಮಾಡದೇ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಸಚಿವ ಬೈರತಿ ಸುರೇಶ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನಮ್ಮ ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದು, ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಯಾವುದೇ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡುತ್ತಿದೆ ಎಂದರು.

ಹೆಬ್ಬಾಳದ ಸೌಂದರ್ಯಕ್ಕೆ ಆದ್ಯತೆ

ಬೆಂಗಳೂರು ನಗರದಲ್ಲಿ ಹೆಬ್ಬಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಚಿಕ್ಕದಾಗಿ ಚೊಕ್ಕದಾಗಿದೆ. ಇಲ್ಲಿನ ಉದ್ಯಾನಗಳು, ಕೆರೆಗಳು, ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಕ್ಷೇತ್ರವನ್ನು ಇನ್ನಷ್ಟು ಸುಂದರಗೊಳಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Related Posts

Leave a Reply

Your email address will not be published. Required fields are marked *