ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ.


